
ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆ ಸುರಪುರ ಮೂಲದ ದೇವಣ್ಣ(25) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಥಣಿಸಂದ್ರ ರೈಲ್ವೆ ಮೇಲ್ಸೇತುವೆ ಸಮೀಪ ಘಟನೆ ನಡೆದಿದೆ. ಆರೋಪಿ ಚಾಲಕ ದಿನೇಶ ನಾಯ್ಕ್(40)ನನ್ನು ಬಂಧಿಸಲಾಗಿದೆ.
ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ದೇವಣ್ಣ ಬರುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದು ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ. ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 2 ತಿಂಗಳಲ್ಲಿ ಬೆಂಗಳೂರಿನಲ್ಲಿ ಕಸದ ಲಾರಿಗೆ ನಾಲ್ವರು ಬಲಿಯಾಗಿದ್ದಾರೆನ್ನಲಾಗಿದೆ.