alex Certify BREAKING: ಬಿರುಗಾಳಿ ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿರುಗಾಳಿ ಸಹಿತ ಭಾರಿ ಮಳೆ; ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನ ದೇವನಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹೆದ್ದಾರಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಬೈಕ್, ಕಾರುಗಳು ನೀರಿನಲ್ಲಿ ಮುಳುಗಿದ್ದು, ಹಲವೆಡೆಗಳಲ್ಲಿ ರಸ್ತೆ ನದಿಯಂತಾಗಿದ್ದು, ವಾಹನ ಸಂಚರಿಸಲು ಸಾಧ್ಯವಾಗದೇ ವಾಹನ ಸವಾರರು ನಿಂತಲ್ಲೇ ನಿಂತಿದ್ದು ಟ್ರಾಫಿಕ್ ಜಾಮ್ ಸಂಭವಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...