ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಮಧ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿರುವ ಬಿಜೆಪಿಗೆ ದೊಡ್ಡ ಶಾಕ್ ಎದುರಾಗಿದೆ. ಮೇಲ್ಮನೆ ಸದಸ್ಯರಾಗಿರುವ ಆಯನೂರು ಮಂಜುನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಈಶ್ವರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರ ಕುಟುಂಬ ಸದಸ್ಯರ ಹಸ್ತಕ್ಷೇಪದಿಂದ ಕಾರ್ಪೊರೇಟರ್ ಗಳು ತತ್ತರಿಸಿ ಹೋಗಿದ್ದಾರೆ. ಈಶ್ವರಪ್ಪನವರಿಗೆ ಶಕ್ತಿ ಇದ್ದರೆ ತಮ್ಮ ಮಗನನ್ನು ಗೆಲ್ಲಿಸಿಕೊಂಡು ಬರಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ನಾನೂ ಕೂಡಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ. ಧೀರ ಶೂರರಂತೆ ಮಾತನಾಡುವ ಈಶ್ವರಪ್ಪನವರಾಗಲಿ ಅಥವಾ ಅವರ ಪುತ್ರನಾಗಲಿ ಸ್ಪರ್ಧಿಸಲಿ ಎಂದು ಹೇಳಿದ ಅವರು, ದುರಂಹಕಾರದ ಮಾತುಗಳನ್ನಾಡುವ ಈಶ್ವರಪ್ಪನವರಿಗೆ ಜನ ಬುದ್ದಿ ಕಲಿಸಲಿದ್ದಾರೆ ಎಂದರು.