ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘೋರ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ.
ಪತಿ, ಪತ್ನಿ ಹಾಗೂ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 54 ವರ್ಷದ ಸಂತೋಷ್, 50 ವರ್ಷದ ಪತ್ನಿ ಓಮನ್ ಹಾಗೂ 17 ವರ್ಷದ ಮಗಳು ಸನುಷಾ ಮೃತ ದುರ್ದೈವಿಗಳು.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.