ಬೆಂಗಳೂರು : ಬೆಂಗಳೂರಿನ ಬಿಬಿಎಂಪಿ ಕಚೇರಿ ಮೇಲೆ ಇಡಿ (E.D) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಬಿಬಿಎಂಪಿ ಪ್ರಧಾನ ಕಚೇರಿ ಮೇಲೆ ಇಡಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.
ಇಡಿ ಅಧಿಕಾರಿಗಳ ತಂಡವು ಅಕ್ರಮ ಹಣ ವರ್ಗಾವಣೆ ಕುರಿತಂತೆ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
ಬಿಬಿಎಂಪಿಯ ಚೀಫ್ ಇಂಜಿನಿಯರ್ ಕಚೇರಿ ಸೇರಿ ಹಲವು ಕಚೇರಿಯಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, 7 ಅಧಿಕಾರಿಗಳ ತಂಡ ಪರಿಶೀಲನೆಯಲ್ಲಿ ತೊಡಗಿದೆ ಎಂಬ ಮಾಹಿತಿ ಲಭ್ಯವಾಗಿದೆ.