
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಈ ದುರಂತ ಸಂಭವಿಸಿದ್ದು, ಭಾರಿ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಸೆಲ್ವಿ, ಶ್ರೀವಾತ್ಸವ್, ನೀರಜ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.