
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದು, ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ. ಜನಾರ್ಧನ ಪೂಜಾರಿ ಹಾಗೂ ಮಣಿ ಮೃತರು. ಮೃತರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮೃತ ಜನಾರ್ಧನ ಪೂಜಾರಿ ಕೊಪ್ಪಳ ಜಿಲ್ಲೆಯ ಲಿಂಗದಮನಿ ನಿವಾಸಿಯಾಗಿದ್ದರೆ, ಮಣಿ ಕೋಲಾರ ಮೂಲದವರು. ಸ್ಥಳಕ್ಕೆ ಮದ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.