ಚಿಕ್ಕಮಗಳೂರು: ಬೈಕ್ ಸವಾರರಿಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಬಳಿ ನಡೆದಿದೆ.
ಬಾಳೆಹೊನ್ನೂರು ಬಳಿಯ ಚಂದ್ರುಳ್ಳಿಬಿದರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿಯೇ ಬೈಕ್ ಸವಾರಿಬ್ಬರೂ ಸಾವನ್ನಪ್ಪಿದ್ದಾರೆ.
ಚಂದ್ರುಳ್ಳಿ ಗ್ರಾಮದ ಪ್ರಕಾಶ್ ಹಾಗೂ ಪ್ರವೀಣ್ ಮೃತರು. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.