alex Certify BREAKING: ಭೀಕರ ಅಪಘಾತ; ಯುವತಿ ದುರ್ಮರಣ; ಯುವಕನ ಒಂದು ಕೈ ಕಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ; ಯುವತಿ ದುರ್ಮರಣ; ಯುವಕನ ಒಂದು ಕೈ ಕಟ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೈಕ್ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರನ ಒಂದು ಕೈ ಕಟ್ ಆಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಲಹಂಕದಲ್ಲಿ ನಡೆದಿದೆ.

ಯಲಹಂಕ ಫ್ಲೈ ಓವರ್ ಮೇಲೆ ಈ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿ ಇದ್ದ ಯುವತಿ ಹಾಗೂ ಬೈಕ್ ಸವಾರ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಯುವಕನ ಒಂದು ಕೈ ಕಟ್ ಆಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...