alex Certify BREAKING: ಭೀಕರ ಸರಣಿ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಸರಣಿ ಅಪಘಾತ; ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: 2 ಲಾರಿ ಹಾಗೂ ಒಂದು ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ತಾಲೂಕಿನಲ್ಲಿ ನಡೆದಿದೆ.

ಕಾರಿನ ಮುಂದೆ ತೆರಳುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂದಿನಿಂದ ಬಂದ ಆಲ್ಟೋ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಕಾರಿಗೆ ಹಿಂದಿನಿಂದ ಬಂದ ಲಾರಿ ಕೂಡ ಗುದ್ದಿದ್ದು ಭೀಕರ ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಶಿವಪುರದ ಮುಪ್ಪಿನ ಕಾಡಸಿದ್ದೇಶ್ವರ ಶ್ರೀ ಸೇರಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...