ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ರಾಜ್ಯ ಸರ್ಕಾರ ಬಿಗ್ ಟ್ವಿಸ್ಟ್ ಕೊಟ್ಟಿದ್ದು ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇಬ್ಬರು ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿತ್ತು. ಆದರೂ ಬಗ್ಗದ ಡಿ.ರೂಪಾ, ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಫೋಟೋಗಳನ್ನು ಫೋಸ್ಟ್ ಮಾಡುವ ಮೂಲಕ ಕಿಡಿ ಕಾರಿದ್ದರು.
ಈ ಎಲ್ಲಾ ಬೆಳವಣಿಗಳ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಡಿ.ರೂಪಾ, ಐಎ ಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಮುನೀಶ್ ಮೌದ್ಗಿಲ್ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂವರು ಅಧಿಕಾರಿಗಳಿಗೆ ಯಾವುದೇ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಕರಕುಷಲ ನಿಗಮ ಎಂಡಿ ಆಗಿದ್ದ ಡಿ.ರೂಪಾ ಮೌದ್ಗಿಲ್ ಅವರ ಜಾಗಕ್ಕೆ ಡಿ.ಭಾರತಿ ಅವರನ್ನು ನೇಮಕ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಜಾಗಕ್ಕೆ ಹೆಚ್.ಬಸವರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸರ್ವೆ ಮತ್ತು ಭೂ ದಾಖಲೆಗಳ ಆಯುಕ್ತರಾಗಿದ್ದ ಮುನೀಶ್ ಮೌದ್ಗಿಲ್ ಅವರನ್ನು ಆಡಳಿತ ಸುಧಾರಣ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆದರೆ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡದೇ ಸರ್ಕಾರ ಕ್ರಮ ಕೈಗೊಂಡಿದೆ.