alex Certify BREAKING: ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ವಿಧಾನಸೌಧದಿಂದ ಬಿಎಂಟಿಸಿ ಬಸ್ ನಲ್ಲಿ ಮೆಜೆಸ್ಟಿಕ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮೆಜೆಸ್ಟಿಕ್ ನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡಿದರು. ಇದೇ ವೇಳೆ ಇನ್ನೂ ಹಲವು ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಮಹಿಳಾ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಉಚಿತ ಟಿಕೆಟ್ ವಿತರಿಸಿದರು.

ಇದೇ ವೇಳೆ ಮಹಿಳೆಯರಿಗೆ ಹೂವು ಹಾಗೂ ಸಿಹಿ ತಿನಿಸನ್ನು ಹಂಚಲಾಯಿತು. ಮೆಜೆಸ್ಟಿಕ್ ನಲ್ಲಿ ಉಚಿತ ಬಸ್ ಪ್ರಯಾಣದ ಟಿಕೆಟ್ ಪಡೆದ ಮಹಿಳೆಯರು ಖುಷಿಯಿಂದ ಕುಣಿದು ಸಂಭ್ರಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...