ಬೆಳಗಾವಿ: ನನಗೆ ಅಥಣಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಕೊಡುವುದಾಗಿ ಹೇಳಿ ಬಿಜೆಪಿ ಮಾತಿಗೆ ತಪ್ಪಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಲಕ್ಷ್ಮಣ ಸವದಿ, ನಾನು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧರಿಸಿದ್ದೇನೆ. ಮುಂದಿನ ತೀರ್ಮಾನವನ್ನು ನಾಳೆ ಕ್ಷೇತ್ರದ ಜನತೆ ಜೊತೆ ಚರ್ಚಿಸಿ ಘೋಷಿಸುತ್ತೇನೆ. ಅಥಣಿ ಜನರೇ ನನ್ನ ಹೈಕಮಾಂಡ್ ಎಂದು ತಿಳಿಸಿದ್ದಾರೆ.
ಬಿಜೆಪಿಯಿಂದ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ನನ್ನ ಜವಾಬ್ದಾರಿ. ಹಾಗಾಗಿ ಕ್ಷೇತ್ರದ ಜನರ ಜೊತೆ ಚರ್ಚಿಸುತ್ತೇನೆ. ರಾಜ್ಯದಲ್ಲಿ ಗೆಲ್ಲಿಸುವ ತಾಕತ್ತು ಇರುವುದು ರಮೇಶ್ ಅಣ್ಣನಿಗೆ ಮಾತ್ರ ಅವರು ಶಕ್ತಿವಂತರು, ಬಲಾಢ್ಯರು ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದ್ದಾರೆ.
ನಾನು ಕಳೆದ 20 ವರ್ಷಗಳಿಂದ ಪಕ್ಷ ಸಂಘಟನೆ ಸೇರಿದಂತೆ ಹಲವು ಕೆಲಸವನ್ನು ಮಾಡಿದ್ದೇನೆ. ನನ್ನೊಂದಿಗೆ ಅನೇಕರು ಪಕ್ಷಕ್ಕಾಗಿ ದುಡಿದಿದ್ದಾರೆ. ಟಿಕೆಟ್ ಕೊಡುವ ಭರವಸೆ ನೀಡಿದ್ದ ಸಿಎಂ ಬೊಮ್ಮಾಯಿ ಅವರಿಗೆ ಅಥಣಿ ಕ್ಷೇತ್ರದ ಟಿಕೆಟ್ ಕೊಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ನಾನು ಬಿಜೆಪಿ ತೊರೆಯಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.