ಬೆಂಗಳೂರು: ಮಾರ್ಚ್ 9ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದೆ. 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವರು, 5,716 ಕಾಲೇಜುಗಳ ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊಬೈಲ್ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದರು.
ಮೊದಲ ಬಾರಿಗೆ ಪಿಯುಸಿ ಪರೀಕ್ಷೆಗೆ ಬಹುಆಯ್ಕೆ ಇರಲಿದೆ. ಮಕ್ಕಳು ಉತ್ತೀರ್ಣರಾಗಲು 3 ಹಂತದ ಪ್ರಶ್ನೆಗಳು ಇರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.