ಏರ್ ಇಂಡಿಯಾ ವಿಮಾನವನ್ನು ಎಳೆದುಕೊಂಡು ಹೋಗುತ್ತಿದ್ದ ವಾಹನವೊಂದರಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡ ಪರಿಣಾಮ ಆ ವಾಹನವು ಅಗ್ನಿಗೆ ಆಹುತಿಯಾದ ಆಘಾತಕಾರಿ ಘಟನೆಯು ಮಹಾರಾಷ್ಟ್ರದ ಮುಂಬೈ ಏರ್ಪೋರ್ಟ್ನಲ್ಲಿ ಸಂಭವಿಸಿದೆ. ಇಂದು ಮಧಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮುಂಬೈ ಏರ್ಪೋರ್ಟ್ ಆಡಳಿತ ಮಂಡಳಿ ಅಧಿಕೃತ ಮಾಹಿತಿ ನೀಡಿದೆ. ಅಗ್ನಿ ಅವಘಡದ ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳದತ್ತ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.ಇದರಿಂದ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಹಾನಿ ಸಂಭವಿಸಿಲ್ಲ. ಈ ಅವಘಡದಕ್ಕೆ ನಿಖರ ಕಾರಣ ಎನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಇನ್ನು ಈ ವಿಚಾರವಾಗಿ ಮಾತನಾಡಿದ ಮುಂಬೈ ವಿಮಾನ ನಿಲ್ದಾಣದ ಮಾಧ್ಯಮ ವಕ್ತಾರ, 85 ಪ್ರಯಾಣಿಕರಿದ್ದ ಏರ್ ಇಂಡಿಯಾದ ಮುಂಬೈ-ಜಾಮ್ನಗರ ವಿಮಾನದ ಪುಶ್ಬ್ಯಾಕ್ ಟ್ರಾಲಿ ಸೇವೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದರು.