alex Certify BREAKING: ಮುಂಬೈ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಂಬೈ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ..!

ಏರ್​ ಇಂಡಿಯಾ ವಿಮಾನವನ್ನು ಎಳೆದುಕೊಂಡು ಹೋಗುತ್ತಿದ್ದ ವಾಹನವೊಂದರಲ್ಲಿ ಹಠಾತ್​ ಬೆಂಕಿ ಕಾಣಿಸಿಕೊಂಡ ಪರಿಣಾಮ ಆ ವಾಹನವು ಅಗ್ನಿಗೆ ಆಹುತಿಯಾದ ಆಘಾತಕಾರಿ ಘಟನೆಯು ಮಹಾರಾಷ್ಟ್ರದ ಮುಂಬೈ ಏರ್​ಪೋರ್ಟ್​ನಲ್ಲಿ ಸಂಭವಿಸಿದೆ. ಇಂದು ಮಧಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಅದೃಷ್ಟವಶಾತ್​ ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮುಂಬೈ ಏರ್​ಪೋರ್ಟ್ ಆಡಳಿತ ಮಂಡಳಿ ಅಧಿಕೃತ ಮಾಹಿತಿ ನೀಡಿದೆ. ಅಗ್ನಿ ಅವಘಡದ ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳದತ್ತ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು.ಇದರಿಂದ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಹಾನಿ ಸಂಭವಿಸಿಲ್ಲ. ಈ ಅವಘಡದಕ್ಕೆ ನಿಖರ ಕಾರಣ ಎನು ಎಂಬುದು ಇನ್ನೂ ತಿಳಿದುಬಂದಿಲ್ಲ.

ಇನ್ನು ಈ ವಿಚಾರವಾಗಿ ಮಾತನಾಡಿದ ಮುಂಬೈ ವಿಮಾನ ನಿಲ್ದಾಣದ ಮಾಧ್ಯಮ ವಕ್ತಾರ, 85 ಪ್ರಯಾಣಿಕರಿದ್ದ ಏರ್ ಇಂಡಿಯಾದ ಮುಂಬೈ-ಜಾಮ್‌ನಗರ ವಿಮಾನದ ಪುಶ್‌ಬ್ಯಾಕ್ ಟ್ರಾಲಿ ಸೇವೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದರು.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...