ನವದೆಹಲಿ; ಕರ್ನಾಟಕದ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾಹಿತಿ ನೀಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪುಷ್ಪ ಅಮರನಾಥ್, ಸಿದ್ದರಾಮಯ್ಯ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಈ ವೇಳೆ ಸಿದ್ದರಾಮಯ್ಯನವರ ಹೆಸರು ಸಿಎಂ ಸ್ಥಾನಕ್ಕೆ ಅಂತಿಮವಾಗಿದೆ. ಕೆಲವೇ ಕ್ಷಣಗಳಲ್ಲಿ ರಾಹುಲ್ ಗಾಂಧಿಯವರೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.