ಬೆಂಗಳೂರು: ‘ಮುಡಾ’ ಹಗರಣ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಿದ್ದು, ಜ.27 ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ರಿಟ್ ಅರ್ಜಿಯ ವಿಚಾರಣೆ ನಡೆದಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದರು. ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಕಾಲಾವಕಾಶ ನೀಡುವಂತೆ ಜಡ್ಜ್ ಗೆ ಮನವಿ ಮಾಡಿದ್ದು, ಮನವಿ ಪರಿಗಣಿಸಿದ ಕೋರ್ಟ್ ಜ.27 ಕ್ಕೆ ವಿಚಾರಣೆ ಮುಂದೂಡಿದೆ.