ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದು, ಡಾ.ಶಿವಮೂರ್ತಿ ಶರಣರಿಗೆ ಮತ್ತೆ ಜೈಲೇ ಗತಿಯಾಗಿದೆ.
ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳು ಜಾಮೀನು ಕೋರಿ ಚಿತ್ರದುರ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ಕೆ.ಕೋಮಲಾ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.