ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಘಟನಾನುಘಟಿ ನಾಯಕರು, ಸಚಿವರು, ಮಾಜಿ ಸಚಿವರುಗಳು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬೆನ್ನಲ್ಲೇ ಇದೀಗ ಸಚಿವ ಎಸ್. ಅಂಗಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಚುನಾವಣಾ ರಾಜಕೀಯದಿಂದ ದೂರ ಉಳಿಯಲು ಸಚಿವ ಎಸ್. ಅಂಗಾರ ನಿರ್ಧರಿಸಿದ್ದು, ಈ ಬಾರಿ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಸುಳ್ಯ ಬಿಜೆಪಿ ಟಿಕೆಟ್ ಎಸ್. ಅಂಗಾರ ಅವರ ಕೈತಪ್ಪಿದ್ದು, ಭಾಗೀರಥಿ ಮುರುಳಯ್ಯ ಅವರಿಗೆ ಬಿಜೆಪಿ ಮಣೆ ಹಾಕಿದೆ, ಈ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಸಚಿವ ಅಂಗಾರ ರಾಜಕೀಯದಿಂದಲೇ ನಿವೃತ್ತಿ ಘೋಷಿಸಿದ್ದಾರೆ.