ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 531 ಜನರಿಗೆ ಕೊರೋನಾ ಸೋಂಕು ತಗಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,42,031 ಕ್ಕೆ ಏರಿಕೆಯಾಗಿದೆ.
ಇವತ್ತು ರಾಜ್ಯದಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 12,233 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 434 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 9,23,811 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 5968 ಸಕ್ರಿಯ ಪ್ರಕರಣಗಳು ಇವೆ.
ಬೆಂಗಳೂರಿನಲ್ಲಿ ಇಂದು 318 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,00,315 ಬೆಂಗಳೂರಿನಲ್ಲಿ ಇಂದು ಒಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4402 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 213 ಇವತ್ತು ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 3,91,975 ಜನ ಡಿಸ್ಚಾರ್ಜ್ ಆಗಿದ್ದಾರೆ. 3937 ಸಕ್ರಿಯ ಪ್ರಕರಣಗಳಿವೆ.