alex Certify BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ – 468 ಜನರಿಗೆ ಸೋಂಕು, ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಕೆ – 468 ಜನರಿಗೆ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 468 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,38,401 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 607 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 9,20,110 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,211 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 6061 ಸಕ್ರಿಯ ಪ್ರಕರಣಗಳಿದ್ದು, 148 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 264 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 3,98,411 ಕ್ಕೆ ಏರಿಕೆಯಾಗಿದೆ. ಇಂದು 318 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,90,147 ಜನ ಬಿಡುಗಡೆಯಾಗಿದ್ದಾರೆ. 3877 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. 4386 ಜನ ಸೋಂಕಿತರು ಇದುವರೆಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...