alex Certify BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ

 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 375 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,36,426 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 1036 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 9,17,361 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇವತ್ತು ಮೂರು ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,200 ಮಂದಿ ಸಾವನ್ನಪ್ಪಿದ್ದಾರೆ. 6846 ಸಕ್ರಿಯ ಪ್ರಕರಣಗಳಿದ್ದು, 152 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 200 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 3,97,333 ಕ್ಕೆ ಏರಿಕೆಯಾಗಿದೆ. ಇವತ್ತು ಇಬ್ಬರು ಸೋಂಕಿತರು ಕೊರೋನಾದಿಂದ ಮೃತಪಟ್ಟಿದ್ದು, ಇದುವರೆಗೆ 4380 ಜನ ಸಾವನ್ನಪ್ಪಿದ್ದಾರೆ. 3,88,510 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4380 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...