ಬೆಂಗಳೂರು: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿಯಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ ತಗುಲಿದ್ದ 73 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ಕರ್ನಾಟಕ ರಾಜ್ಯದಲ್ಲಿ ಝೀಕಾ ವೈರಸ್ ನಿಂದ ಮೊದಲ ಸಾವು ಸಂಭವಿಸಿದೆ. ಝೀಕಾ ವೈರಸ್ ಲಕ್ಷಣಗಳಿದ್ದ ಕಾರಣ ವೃದ್ಧನಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.