ಬೆಂಗಳೂರು: ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.