ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.