ಲಂಚ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ದೊರೆತಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 5 ಲಕ್ಷ ರೂಪಾಯಿ ಮೊತ್ತದ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ.
ಅಲ್ಲದೆ ಮೂರು ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕಿದ್ದು ಜೊತೆಗೆ ತನಿಖಾಧಿಕಾರಿ ವಶಕ್ಕೆ ಪಾಸ್ಪೋರ್ಟ್ ನೀಡಬೇಕಿದೆ.