ಮೈಸೂರು: ವಿಧಾನಸಭಾ ಚುನಾವಣೆಯ ಹೈವೋಲ್ಟೇಜ್ ಕಣವಾಗಿದ್ದ ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಗೆಲುವಿನ ನಗಾರಿ ಬಾರಿಸಿದ್ದಾರೆ.
ಇತ್ತ ಚಾಮರಾಜನಗರ ಕ್ಷೇತ್ರದಲ್ಲಿಯೂ ಸೋಲನುಭವಿಸಿದ್ದ ಸಚಿವ ವಿ. ಸೋಮಣ್ಣ, ಈಗ ವರುಣಾ ಕ್ಷೇತ್ರದಲ್ಲಿಯೂ ಹೀನಾಯವಾಗಿ ಪರಾಭವಗೊಂಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ್ದು, ವಸತಿ ಸಚಿವ ವಿ. ಸೋಮಣ್ಣಗೆ ಮುಖಭಂಗವಾಗಿದೆ.