ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಇಂದಿನಿಂದಲೇ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.
ನವದೆಹಲಿಯ ವಿಜ್ಞಾನಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಅಯುಕ್ತ ರಾಜಿವ್ ಕುಮಾರ್, ಕರ್ನಾಟಕದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ಕ್ಕೆ ಮತದಾನ ನಡೆಯಲಿದೆ. ಮೇ 1ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ 5 ಕೋಟಿ 21 ಲಕ್ಷ ಮತದಾರರಿದ್ದಾರೆ. ಪುರುಷ ಮತದಾರರು-2,63,43,561, ಮಹಿಳೆಯರು 2,59,26,319 ಮತದಾರರಿದ್ದಾರೆ. ತೃತೀಯಲಿಂಗಿಗಳು 4,699 ಮತದಾರರು ಇದ್ದಾರೆ. 12.15 ಲಕ್ಷ ಯುವ ಮತದಾರರಿದ್ದಾರೆ.
5.55 ಲಕ್ಷ ವಿಕಲಚೇತನ ಮತದಾರರಿದ್ದು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗುವುದು. ಕರ್ನಾಟಕದಲ್ಲಿ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದರು.