ಬೆಂಗಳೂರು: ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ ಮುಂಭಾಗದ ವೇದಿಕೆಯಲ್ಲಿ ದೀಪ ಬೆಳಗುವ ಮೂಲಕ ಸಿಎಂ ಸಿದದ್ರಾಮಯ್ಯ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡಿದರು. ಇದೇ ವೇಳೆ ಶಕ್ತಿ ಯೋಜನೆಯ ಲಾಂಚನವನ್ನು ಬಿಡುಗಡೆ ಮಾಡಲಾಯಿತು. ಅಲ್ಲದೇ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಲಾಯಿತು.
ಇದೇ ವೇಳೆ ಆಯ್ದ 5 ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.
ಎರಡು ಬಿಎಂಟಿಸಿ ಬಸ್ ಗಳಿಗೆ ಚಾಲನೆ ನೀಡುವ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಬಳಿಕ ಬಸ್ ಮೂಲಕವಾಗಿ ಸಿಎಂ ಸಿದ್ದರಾಮಯ್ಯ ಮೆಜೆಸ್ಟಿಕ್ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಟರ್ಮಿನಲ್ 2ಕ್ಕೆ ಆಗಮಿಸಲಿದ್ದಾರೆ. ಮಹಿಳೆಯರಿಗೆ ಶೂನ್ಯ ದರ ಟಿಕೆಟ್ ವಿತರಣೆ ಮಾಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಾರಿಗೆಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ.ಜಾರ್ಜ್, ಮಧುಬಂಗಾರಪ್ಪ, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.