alex Certify BREAKING: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಶೂಟೌಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಶೂಟೌಟ್

ಪಾಟ್ನಾ: ಶಾಲೆಗೆ ತೆರಳುತ್ತಿದ್ದ 15 ವರ್ಷದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಇಂದು ಮುಂಜಾನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಹಿಂದಿನಿಂದ ಬಂದ ದುಷ್ಕರ್ಮಿ, ಆಕೆಯ ಕತ್ತಿಗೆ ಶೂಟ್ ಮಾಡಿದ್ದಾನೆ. ತಕ್ಷಣ ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಮೃತ ವಿದ್ಯಾರ್ಥಿನಿ ತರಕಾರಿ ವ್ಯಾಪಾರಿ ಮಗಳಾಗಿದ್ದು, ಘಟನೆ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಪ್ರೇಮ ಪ್ರಕರಣ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...