ಮೈಸೂರು: ಕೇಕ್ ತಿಂದು 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಶ್ರೀ ಮಂಜುನಾಥ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, ಹೊಸ ವರ್ಷದಂದು ಕೇಕ್ ಕಟ್ ಮಾಡಿ ಮಕ್ಕಳಿಗೆ ವಿತರಿಸಲಾಗಿತ್ತು. ಎರಡು ದಿನದ ನಂತರ ಉಳಿದಿದ್ದ ಕೇಕ್ ಅನ್ನು ವಿದ್ಯಾರ್ಥಿಗಳು ತಿಂದಿದ್ದಾರೆ. ಈ ಕೇಕ್ ತಿಂದ ನಂತರ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿದೆ.
ಬೋಳನಹಳ್ಳಿ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಬಿಇಒ ಮಹದೇವ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ನಿರ್ಲಕ್ಷ್ಯ ವಹಿಸಿದ ಶಾಲಾ ಮುಖ್ಯ ಶಿಕ್ಷಕ ಅಶ್ವತ್ಥ್ ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.