
ತನ್ನ ಪತ್ನಿಯ ಶೀಲದ ಕುರಿತು ಶಂಕೆ ಹೊಂದಿದ್ದ ವ್ಯಕ್ತಿಯೊಬ್ಬ ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಇಂಥದೊಂದು ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆಯ ಅಮರಾವತಿ ಬಡಾವಣೆಯಲ್ಲಿ ನಡೆದಿದ್ದು, 34 ವರ್ಷದ ನಂದಿನಿ ಹತ್ಯೆಗೊಳಗಾದವರಾಗಿದ್ದಾರೆ.
ಪತ್ನಿಯ ಶೀಲದ ಬಗ್ಗೆ ಶಂಕೆ ಹೊಂದಿದ್ದ ನಾಗರಾಜ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬಂಗಾರಪೇಟೆ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.