alex Certify BREAKING: ಸಕ್ಕರೆ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಕ್ಕರೆ ನಾಡಲ್ಲಿ ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ಆರಂಭ

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಪ್ರವಾಸಿ ಮಂದಿರದಿಂದ ರೋಡ್ ಶೋ ಆರಂಭಿಸಿದ್ದಾರೆ. ಸಕ್ಕರೆ ನಾಡಿಗೆ ಬಂದ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ಕೋರಲಾಗಿದೆ.

ಮೈಸೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಮಂಡ್ಯದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಟಿಗರೆದು ಸ್ವಾಗತಿಸಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಕೇಸರಿ ಕಲರವ ಮೊಳಗಿದ್ದು, ಪ್ರಧಾನಿ ಮೋದಿ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ಪ್ರವಾಸಿ ಮಂದಿರದಿಂದ ನಂದಾ ಸರ್ಕಲ್ ವರೆಗೆ ಸುಮಾರು 1.8 ಕೀ.ಮೀ ವರೆಗೆ ರೋಡ್ ಶೋ ಸಾಗಲಿದೆ. ಈ ಮೂಲಕ ಮಂಡ್ಯ, ಹಳೆ ಮೈಸೂರು ಭಾಗದಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಯತ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...