ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ತೆರವು ವಿವಾದದಿಂದಾಗಿ ಶಿವಮೊಗ್ಗ ಜಿಲ್ಲೆ ಉದ್ವಿಗ್ನಗೊಂಡಿದ್ದು, ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ್ದಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.
ಶಿವಮೊಗ್ಗದ ಅಮಿರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ್ದಕ್ಕೆ ಬಜರಂಗ ದಳ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದೇ ವೇಳೆ ಮುಸ್ಲಿಂ ಸಂಘಟನೆಗಳು ಟಿಪ್ಪು ಬಾವುಟ ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ನಡುವೆ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ಕಾರಣಕ್ಕೆ ಪ್ರೇಮ್ ಸಿಂಗ್ ಎಂಬ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.
ಮನೆಯ ಮುಂದೆ ನಿಂತಿದ್ದ ಯುವಕ ಪ್ರೇಮ್ ಸಿಂಗ್ ಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.