alex Certify BREAKING: ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿದ್ದರಾಮಯ್ಯ ಬಳಿಕ ರಾಹುಲ್ ಗಾಂಧಿ ಭೇಟಿಯಾದ ಡಿ.ಕೆ. ಶಿವಕುಮಾರ್

ನವದೆಹಲಿ: ಕರ್ನಾಟಕ ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯ 10 ಜನಪಥ್ ನಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಆಗಮಿಸಿರುವ ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಇದಕ್ಕೂ ಮುನ್ನ ಸಿದ್ದರಾಮಯ್ಯ, ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಬ್ಬರು ನಾಯಕರೊಂದಿಗೆ ರಾಹುಲ್ ಗಾಂಧಿ ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದು, ಕೆಲ ಹೊತ್ತಲ್ಲೇ ನೂತನ ಮುಖ್ಯಮಂತ್ರಿ ಹೆಸರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...