ಚಿತ್ರದುರ್ಗ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಗುಡಿಸಲು ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ.
ಗೌನಹಳ್ಳಿ ನಿವಾಸಿ ಶಿವಣ್ಣ ಎಂಬುವವರಿಗೆ ಸೇರಿದ ಗುಡಿಸಲು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದ್ದು, ಯಾವ ಕಾರಣಕ್ಕೆ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.