ಬೆಂಗಳೂರು : ಏಪ್ರಿಲ್ ತಿಂಗಳಿನಿಂದ ತಲಾ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಏಪ್ರಿಲ್ ತಿಂಗಳಿನಿಂದ ತಲಾ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ, ರಾಜ್ಯಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ದವಿದೆ. ಕೊಟ್ಟ ಮಾತಿನಂತೆ ಅಕ್ಕಿ ಕೊಡುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.ನಾವು ನಿರ್ಣಯ ಮಾಡಿದಂತೆ ಹೆಚ್ಚುವರಿ ಅಕ್ಕಿಗೆ ಹಣ ಕೊಟ್ಟಿದ್ದೆವು ಎಂದರು. ಈಗ ನಮ್ಮ ಬಳಿ ಅಕ್ಕಿ ಇದೆ, ಕೇಂದ್ರ ಸರ್ಕಾರವೂ ಅಕ್ಕಿ ಕೊಡಲು ನಿರ್ಧರಿಸಿದೆ ಎಂದರು. ಹಾಗೆಯೇ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸಚಿವರು ಹೇಳಿದರು.