ಚಿಕ್ಕಮಗಳೂರು : ಹುಲಿ ಉಗುರು ಧರಿಸಿದ್ದ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರು ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ.
ಹುಲಿ ಉಗುರು ಇರುವು ಪೆಂಡೆಂಟ್ ಧರಿಸಿದ ಆರೋಪದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ಖಾಂಡ್ಯದ ಮಾರ್ಕಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಂಧಿಸಲಾಗಿತ್ತು, ಇದೀಗ ಈ ಇಬ್ಬರು ಅರ್ಚಕರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಮೂರು ಹುಲಿ ಉಗುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವನ್ಯಜೀವಿಗಳ ಚರ್ಮ, ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದೆ. ವನ್ಯಜೀವಿಗಳ ಚರ್ಮ ಹುಲಿಯ ಉಗುರು ಧರಿಸುವುದು ಕಾನೂನು ಉಲ್ಲಂಘನೆಯಾಗಿದ್ದು, 1972ರ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆಗುತ್ತದೆ . ವನ್ಯಜೀವಿಗಳ ಚರ್ಮ ಉಗುರು ಬಳಕೆ ಮಾಡುವುದು ನಿಷೇಧವಿದೆ..ಸೋ..ಹುಷಾರಾಗಿರಿ.