alex Certify BREAKING : ರಾಜ್ಯದಲ್ಲಿ 2 ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು : ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ 2 ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು : ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಎರಡು ಭೀಕರ ಅಪಘಾತ ಸಂಭವಿಸಿದ್ದು, ಮೃತಪಟ್ಟ 14 ಮಂದಿ ಕುಟುಂಬಗಳಿಗೆ ಸಿಎಂ ಸಿದ್ದರಾಮಯ್ಯ ತಲಾ 3 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...