ಈಜಿಪ್ಟ್ ನ ಮೆಡಿಟರೇನಿಯನ್ ಪ್ರಾಂತ್ಯ ಅಲೆಕ್ಸಾಂಡ್ರಿಯಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಅಲೆಕ್ಸಾಂಡ್ರಿಯಾ ನಗರದ ಪಶ್ಚಿಮದಲ್ಲಿರುವ ಅಮ್ರೇಯಾ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ 15 ಜನರು ಸಾವನ್ನಪ್ಪಿದ್ದು, ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರದಿ ತಿಳಿಸಿದೆ.
ಟ್ರಕ್ ಮಿನಿಬಸ್, ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಆಂಬ್ಯುಲೆನ್ಸ್ ಗಳು ಅಪಘಾತದ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.