ಕೋಲಾರ : ಕೋಲಾರದ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರ ತಾಲೂಕಿನ ಕೆಂದಟ್ಟ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬೈಕ್, ಟಾಟಾ ಎಸ್, ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.