ವಿಜಯನಗರ: 2 ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗಿತ್ತಿದೆ.
ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಿನ್ನೆ ನಡೆದಿದ್ದ ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ 7 ಜನರು ಸಾವನ್ನಪ್ಪಿದ್ದರು. ಇದೀಗ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಿಂದ ಎರಡು ಆಟೋದಲ್ಲಿ 19 ಜನರು ತುಂಗಭದ್ರಾ ಜಲಾಶಯ ನೋಡಲು ಹೊರಟಿದ್ದರು. ಈ ವೇಳೆ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.