alex Certify BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; 7 ಜನರು ದುರ್ಮರಣ; ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 2 ಆಟೋ-ಲಾರಿ ಅಪಘಾತ ಪ್ರಕರಣ; 7 ಜನರು ದುರ್ಮರಣ; ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ

ವಿಜಯನಗರ: ಎರಡು ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು, 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದರು. ಇದೀಗ ಇನ್ನೋರ್ವ ವ್ಯಕ್ತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಳ್ಳಾರಿಯಿಂದ ತುಂಗಭದ್ರಾ ಡ್ಯಾಂ ಗೆ ಆಟೋದಲ್ಲಿ ಒಟ್ಟು 19 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ವಡ್ಡರಹಳ್ಳಿ ಸೇತುವೆ ಬಳಿ ಎರಡು ಆಟೋ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ. ಆಟೊ ಚಾಲಕ ಸೇರಿ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಈ ನಡುವೆ ಅಪಘಾತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳು ಗಳ ಚಿಕಿತ್ಸೆಗಾಗಿ 50 ಸಾವಿರ ರೂಪಾಯಿ ನೀಡಲಾಗುತ್ತಿದೆ. ಸರ್ಕಾರವೇ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಸಚಿವ ನಾಗೇಂದ್ರ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...