![](https://kannadadunia.com/wp-content/uploads/2023/01/accident.1.38550.jpg)
ರಾಯಚೂರು : ರಾಯಚೂರು ಜಿಲ್ಲೆಯ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಕಸಬೇ ಕ್ಯಾಂಪ್ ಬಳಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಮಾರಿಯಾ ಗೀತಾ ಹಾಗೂ ಅಮಲ್ ಪಾಲ್ ಮೇರಿ ಎಂದು ಗುರುತಿಸಲಾಗಿದೆ.
ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.