ಬೆಂಗಳೂರು : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬೆಂಗಳೂರಿನ ಸುಧಾಮನಗರದಲ್ಲಿ ಈ ಘಟನೆ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ 21 ವರ್ಷ ವಯಸ್ಸಿನ ವರ್ಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ಈಕೆ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.