ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕೊಳವೆ ಬಾವಿ ನೀರು ಕುಡಿದು 24 ಮಕ್ಕಳು ಅಸ್ವಸ್ಥರಾಗಿದ್ದು, ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಕೊಳವೆ ಬಾವಿಯಲ್ಲಿನ ನೀರು ಕುಡಿದು 24 ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಚಿಕ್ಕನಹಳ್ಳಿಗೆ ಸುರಪುರ ಟಿಹೆಚ್ ಒ ಡಾ.ಆರ್.ವಿ. ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.