alex Certify BREAKING : ಬೆಂಗಳೂರಿನಲ್ಲಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ : `NIA’ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ 24 ಮಂದಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ : `NIA’ ಮಹತ್ವದ ಮಾಹಿತಿ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದ ವೇಳೆ 24 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ ಎಂಬ ಮಹತ್ವದ ಮಾಹಿತಿ ಬಹಿರಂಗವಾಗಿದೆ.

ಬೆಂಗಳೂರಿನ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು ಮೊದಲಿಗೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದುಕೊಂಡಿತ್ತು. ಆದರೆ 24 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

2011 ರಿಂದ ದೇಶದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ. ಬ್ರೋಕರ್ ಗೆ 20 ಸಾವಿರ ರೂ. ಹಣ ನೀಡಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ. ಆಧಾರ್ ಕಾರ್ಡ್, ಐಡಿ ಕಾರ್ಡ್ ಸೇರಿದಂತೆ ಹಲವು ಕಾರ್ಡ್ ಮಾಡಿಸಿದ್ದಾರೆ ಎನ್ನಲಾಗಿದ್ದು, ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...