ಮೈಸೂರು: ಮೈಸೂರಿನಲ್ಲಿ ಶಾಲೆಗೆ ಹೋಗಿದ್ದ ಬಾಲಕಿಯನ್ನು ಶೌಚಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶಾಲೆಯೊಂದರಲ್ಲಿ 2 ನೇ ತರಗತಿ ಓದುತ್ತಿರುವ ಬಾಲಕಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಅಪರಿಚಿತರು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿತ ಪರಿಣಾಮ ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಬಾಲಕಿಯ ಕಿರುಚಾಟದ ಶಬ್ದ ಕೇಳಿ ಶಿಕ್ಷಕರು ಶೌಚಾಲಯಕ್ಕೆಹೋಗಿದ್ದಾರೆ. ಬಾಲಕಿ ಭಯಗೊಂಡಿದ್ದು, ಕೂಡಲೇ ಶಾಲೆಯ ಮುಖ್ಯ ಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.