alex Certify BREAKING : 2 ನೇ ತರಗತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2 ನೇ ತರಗತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನ..!

ಮೈಸೂರು: ಮೈಸೂರಿನಲ್ಲಿ ಶಾಲೆಗೆ ಹೋಗಿದ್ದ ಬಾಲಕಿಯನ್ನು ಶೌಚಾಲಯದಲ್ಲಿ ಅಪರಿಚಿತ ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಶಾಲೆಯೊಂದರಲ್ಲಿ 2 ನೇ ತರಗತಿ ಓದುತ್ತಿರುವ ಬಾಲಕಿ ಶೌಚಾಲಯಕ್ಕೆ ಹೋಗಿದ್ದ ವೇಳೆ ಅಪರಿಚಿತರು ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅಪಹರಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿತ ಪರಿಣಾಮ ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.

ಬಾಲಕಿಯ ಕಿರುಚಾಟದ ಶಬ್ದ ಕೇಳಿ ಶಿಕ್ಷಕರು ಶೌಚಾಲಯಕ್ಕೆಹೋಗಿದ್ದಾರೆ. ಬಾಲಕಿ ಭಯಗೊಂಡಿದ್ದು, ಕೂಡಲೇ ಶಾಲೆಯ ಮುಖ್ಯ ಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...